ಕಾರ್ಕಳ : ಸಾಣೂರು ರಾಜೇಶ್ವರಿ ಕಾಲೇಜಿನಲ್ಲಿ ಬುಧವಾರ ಗುರುವಂದನಾ ಹಾಗೂ ಕಾರ್ಗಿಲ್ ವಿಜಯ ದಿನಾಚರಣೆ ಭಕ್ತಿಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪವನ್ ಕಿರಣ್ ಕೆರೆ ಅವರು ಶಿಕ್ಷಣದ ಮೌಲ್ಯ ಹಾಗೂ ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.
ಶ್ರೀ ಲಕ್ಷ್ಮೀ ಮತ್ತು ತಂಡದಿಂದ ಗುರುವಂದನಾ ಗೀತೆ ಪ್ರಸ್ತುತಪಡಿಸಲಾಯಿತು. ಸೂರಜ್ ಮಂಗಳೂರು ಅವರು ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಯೋಧರ ಶೌರ್ಯ, ತ್ಯಾಗ ಹಾಗೂ ದೇಶಭಕ್ತಿ ಕುರಿತು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ರಾಜೇಶ್ವರಿ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಗುರುಗಳಿಗೆ ಗೌರವ ಸಲ್ಲಿಸುವುದು ಭಾರತೀಯ ಸಂಸ್ಕೃತಿಯ ಶ್ರೇಷ್ಠ ಪರಂಪರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ತ್ಯಾಗವನ್ನು ಪ್ರತಿಯೊಬ್ಬರೂ ಸದಾ ಸ್ಮರಿಸಬೇಕು ಎಂದರು.
ವಿದ್ಯಾರ್ಥಿಗಳು ಮುಂದಕ್ಕೆ ಒಂದು ಒಳ್ಳೆಯ ಸಮಾಜ ನಿರ್ಮಾಣ ಮಾಡಬೇಕು. ಯುವ ಪೀಳಿಗೆಗೆ ಒಂದು ಶಕ್ತಿಯನ್ನು ಕೊಡಬೇಕು. ಗಟ್ಟಿ ರಾಷ್ಟ್ರವನ್ನು ಕಟ್ಟಬೇಕು ಗುರುಗಳಿಗೆ ಗೌರವ ಕೊಡಲು ಸಾಧ್ಯವಿಲ್ಲದವರು ಸಾಧಕರಾಗುವುದಕ್ಕೆ ಸಾಧ್ಯವಿಲ್ಲ ಎಂದರು.
ಉದಯ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರಣವ್ ಭಟ್ ವಂದಿಸಿದರು. ಉಷಾ ಅಂಬರೀಷ್ ನಿರೂಪಿಸಿದರು.
ರಾಜೇಶ್ವರಿ ಕಾಲೇಜಿನಲ್ಲಿ ಗುರುವಂದನಾ – ಕಾರ್ಗಿಲ್ ವಿಜಯ ದಿನಾಚರಣೆ











