ಶಾಸಕ ಯಶ್‌ಪಾಲ್ ವಿರುದ್ಧ ಕಾರ್ಕಳ ಕಾಂಗ್ರೆಸ್ ದೂರು

ಕಾರ್ಕಳ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಂಶವನ್ನು ದ್ವಂಸ ಮಾಡುವುದಾಗಿ ಹೇಳಿಕೆ ನೀಡಿರುವ ಶಾಸಕ ಯಶ್‌ಪಾಲ್ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ.
ವಿದ್ಯಾರ್ಥಿಗಳ ಪರವಾಗಿ ರಾಹುಲ್ ಗಾಂಧಿ ಹೋರಾಟ ಮಾಡಿದ್ದೆ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ. ಉಡುಪಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಯಶ್‌ಪಾಲ್ ಸುವರ್ಣ ಅವರು ರಾಹುಲ್ ಗಾಂಧಿಯವರಿಗೆ ಕೊಲೆ ಬೆದರಿಕೆಯೊಡ್ಡಿದ್ದಾರೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಪಕ್ಷದ ಪ್ರಮುಖರಾದ ಉದಯ ಶೆಟ್ಟಿ ಕುಕ್ಕುಂದೂರು, ಸುಧಾಕರ ಶೆಟ್ಟಿ ಮುಡಾರ್, ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ವಿವೇಕಾನಂದ ಶೆಣೈ, ಜಾರ್ಜ್ ಕ್ಯಾಸ್ಟಲಿನೋ, ಸುನಿಲ್ ಭಂಡಾರಿ, ರಾಜೇಂದ್ರ ದೇವಾಡಿಗ, ಪ್ರತಿಮಾ ರಾಣೆ, ಜೋಕಿಮ್ ಪಿಂಟೋ, ಆರಿಫ್ ಕಲ್ಲೋಟ್ಟೆ, ಅಕ್ಷಯ್ ಬಂಗೇರ, ಹೇಮಂತ್ ಆಚಾರ್ಯ ಉಪಸ್ಥಿತರಿದ್ದರು.























error: Content is protected !!
Scroll to Top