ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಶಿವಪುರ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಚೆಸ್ ಪಂದ್ಯಾಕೂಟದಲ್ಲಿ ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಅವನಿ ಶೆಟ್ಟಿ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ಡೊಂಡೆರಂಗಡಿ ರಘುಚಂದ್ರ ಶೆಟ್ಟಿ ಹಾಗೂ ಶುಭಲತಾ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.
ಚೆಸ್ : ಅಜೆಕಾರು ಜ್ಞಾನಸುಧಾದ ಅವನಿ ಶೆಟ್ಟಿ ಜಿಲ್ಲಾಮಟ್ಟಕ್ಕೆ ಆಯ್ಕೆ
























