ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಶಿವಪುರ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಚೆಸ್ ಪಂದ್ಯಾಕೂಟದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ಹತ್ತನೆಯ ತರಗತಿಯ ವಿದ್ಯಾರ್ಥಿ ಜೀತ್ ನಾಯಕ್ ವಿಜೇತನಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈತ ಜೋಡುರಸ್ತೆ ನಿವಾಸಿ ವೆಂಕಟೇಶ್ ನಾಯಕ್ ಹಾಗೂ ಐಶ್ವರಿ ದಂಪತಿ ಪುತ್ರ.
ಸಾಧಕ ವಿದ್ಯಾರ್ಥಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಬಂಧುಗಳು ಅಭಿನಂದಿಸಿದ್ದಾರೆ.
ಚೆಸ್ : ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯ ಜೀತ್ ನಾಯಕ್ ಜಿಲ್ಲಾ ಮಟ್ಟಕ್ಕೆ



























