ಆ.9 : ಬಿಲ್ಲವ ಸಮಾಜ ಸೇವಾ ಸಂಘ ಬಜಗೋಳಿ – ಆಟಿಡೊಂಜಿ ಕೆಸರ್ದ ಕೂಟ

ಕಾರ್ಕಳ : ಬಿಲ್ಲವ ಸಮಾಜ ಸೇವಾ ಸಂಘ ಬಜಗೋಳಿ ಇವರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ಕೆರ್ವಾಶೆ ಇವರ ನೇತೃತ್ವದಲ್ಲಿ ಆ. 9ರಂದು ಕೆರ್ವಾಶೆ ಬಂಗ್ಲೆಗುಡ್ಡೆ ಹರಿಕುಮೇರು ದಯಾನಂದ ಸಾಲ್ಯಾನ್‌ ಅವರ ಗದ್ದೆಯಲ್ಲಿ ಆಟಿಡೊಂಜಿ ಕೆಸರ್ದ ಕೂಟ ನಡೆಯಲಿದೆ.

ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ವಿ. ಸುನಿಲ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿರುವರು. ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭಾಸ್ಕರ್‌ ಎಸ್.‌ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು.
ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೆರ್ವಾಶೆ ಗ್ರಾಮ ಸಮಿತಿ ಅಧ್ಯಕ್ಷ ಪ್ರಕಾಶ್‌ ಪೂಜಾರಿ ಅಧ್ಯಕ್ಷತೆ ವಹಿಸಲಿರುವರು. ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ, ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಸ್ಪರ್ಧೆ ನಡಯಲಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















































error: Content is protected !!
Scroll to Top