ಕೇಂದ್ರದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ 5 ವರ್ಷ ವಿಸ್ತರಣೆ

ದೆಹಲಿ : ಕೇಂದ್ರ ಸರ್ಕಾರ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಅರ್ಹ ರೈತರಿಗೆ ವಾರ್ಷಿಕ 6,000 ರೂ. ನೀಡುವ ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌’ ಯೋಜನೆಯನ್ನು ಇನ್ನೂ ಐದು ವರ್ಷಗಳ ಕಾಲ (2030-31) ವಿಸ್ತರಿಸಿದೆ.

ಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ. ವಿಸ್ತರಿತ ಅವಧಿಗಾಗಿ ಯೋಜನೆಗೆ 3,15,614 ಕೋಟಿ ರೂ.ಗಳ ಅನುದಾನ ಒದಗಿಸಲು ಸಂಪುಟ ಸಭೆ ಅನುಮೋದಿಸಿದೆ.

ಸಭೆಯ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ‘ಯೋಜನೆಯ ವಿಸ್ತರಣೆಯು ರೈತರಿಗೆ ಕೃಷಿಯಲ್ಲಿ ಹೂಡಿಕೆ ಹೆಚ್ಚಿಸಲು, ಉತ್ಪಾದಕತೆ ಹೆಚ್ಚಿಸಲು ನೆರವಾಗಲಿದೆ. ಇದುವರೆಗೂ 4.47 ಲಕ್ಷ ಕೋಟಿ ರೂ.ಗಳನ್ನು ಯೋಜನೆಯಡಿ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. 2019ರಲ್ಲಿಆರಂಭಿಸಲಾದ ಈ ಯೋಜನೆಯಡಿ ಸರಕಾರ ಅರ್ಹ ರೈತರಿಗೆ 3 ಕಂತುಗಳಲ್ಲಿ ವಾರ್ಷಿಕ 6,000 ರೂ.ಗಳ ನೆರವು ಒದಗಿಸುತ್ತದೆ.

















































error: Content is protected !!
Scroll to Top