ದಯಾನಂದ ಪೈ ಅವರಿಗೆ ಶೇಖರ್‌ ಅಜೆಕಾರ್‌ ಪ್ರಶಸ್ತಿ

ಆ. 6ರಂದು ರಾಜೇಶ್ವರಿ ಕಾಲೇಜಿನಲ್ಲಿ ಪ್ರದಾನ

ಕಾರ್ಕಳ : ಪತ್ರಕರ್ತ, ಸಾಹಿತಿ ದಿ. ಡಾ. ಶೇಖರ್ ಅಜೆಕಾರ್ ಅವರ ಸವಿನೆನಪಿಗಾಗಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ 2025-26ನೇ ಸಾಲಿನ ʼಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ, ಡಂಗುರ ವಾರಪತ್ರಿಕೆಯ ಸಂಪಾದಕ ಕುಂಟಾಡಿ ದಯಾನಂದ ಪೈ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಆ. 6ರಂದು ಸಾಣೂರು ರಾಜೇಶ್ವರಿ ಕಾಲೇಜಿನಲ್ಲಿ ನಡೆಲಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಪ್ರಶಸ್ತಿ ಪ್ರದಾನ ಮಾಡಲಿರುವರು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಕ್ವಾರಿ, ಕ್ರಷರ್ ಓನರ್ಸ್‌ ಅಸೋಸಿಯೇಷನ್‌ನ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಸಾಣೂರು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸಾಣೂರು ಈಶ ವ್ಯಾಸಂ ಟ್ರಸ್ಟ್ ಅಧ್ಯಕ್ಷ ಶ್ರೀರಾಮ್ ಭಟ್, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ, ಉಪಾಧ್ಯಕ್ಷ ಉದಯ ಕುಮಾರ್ ಮುಂಡ್ಕೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಮಿತಿ ಸದಸ್ಯ ಆಸ್ಟ್ರೋ ಮೋಹನ್ ಭಾಗವಹಿಸಲಿದ್ದಾರೆ ಎಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಸಚ್ಚರಿಪೇಟೆ ಮತ್ತು ಕೋಶಾಧಿಕಾರಿ ಸತೀಶ್ ಎಚ್. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















































error: Content is protected !!
Scroll to Top