ಉಡುಪಿ: ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನವು ಆ.19ರ ಬೆಳಗ್ಗೆ 10.15 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.
ಆಸಕ್ತ ಎಸೆಸೆಲ್ಸಿ ಉತ್ತೀರ್ಣರಾದ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.
ಮಾಹಿತಿಗೆ ಸಮೀಪದ ಅಂಚೆ ಕಚೇರಿ ಅಥವಾ ಉಡುಪಿ ಅಂಚೆ ವಿಭಾಗದ ಅಂಚೆ ಜೀವವಿಮೆ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸುವಂತೆ ಅಂಚೆ ಅಧೀಕ್ಷಕರ ಕಚೇರಿ ಪ್ರಕಟನೆ ತಿಳಿಸಿದೆ.













