ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ – ಪೊಲೀಸ್‌ ದಾಳಿ

ಕಾರ್ಕಳ : ರೆಸಿಡೆನ್ಸಿಯೊಂದರಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಆ.3ರ ರಾತ್ರಿ ನಿಟ್ಟೆಯಲ್ಲಿ ನಡೆದಿದೆ. ದಾಳಿ ವೇಳೆ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಹೋಟೆಲ್‌ ಮಾಲೀಕರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಪೊಲೀಸ್‌ ಉಪನಿರೀಕ್ಷಕ ಪ್ರಸನ್ನ ಎಂ. ಎಸ್.‌ ನೇತೃತ್ವದ ತಂಡ ದಾಳಿ ನಡೆಸಿದ್ದು, ಸುಜೀತ್‌, ಅಭಿಮನ್ಯು, ಮಹೇಶ್‌, ಧೀರಜ್‌, ನರೇಶ್‌ ಕುಮಾರ್‌ ಹಾಗೂ ಪ್ರಶಾಂತ್‌ ಸೇರಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಯಶೋಧರ (ಅಣ್ಣು), ನೂರು ಮಹಮ್ಮದ್‌, ರವಿಶೆಟ್ಟಿ ಹಾಗೂ ಸತೀಶ್‌ ಎಂಬ ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ.

ದಾಳಿಯ ವೇಳೆ ಜುಗಾರಿಗೆ ಬಳಸಲಾಗಿದ್ದ 16,350 ರೂ. ನಗದು, ಇಸ್ಪೀಟು ಎಲೆಗಳು, ಏಳು ಮೊಬೈಲ್‌ ಫೋನ್‌ಗಳು ಹಾಗೂ ಕುರ್ಚಿ ಸೇರಿದಂತೆ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು 43,850 ರೂ. ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಜುಗಾರಿ ನಡೆಸಲು ಅವಕಾಶ ಕಲ್ಪಿಸಿದ್ದ ನಿಟ್ಟೆ ಸನ್ಮಾನ್‌ ರೆಸಿಡೆನ್ಸಿಯ ಮಾಲಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.































error: Content is protected !!
Scroll to Top