ಕಾರ್ಕಳ : ಸನ್ ಕ್ರಿಯೇಶನ್ ಬೆಂಗಳೂರು ಇದರ ಮಾಲಕ ಪಾಂಡುರಂಗ ನಾಯಕ್ ಅವರು ಕಡ್ತಲ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ ಬ್ಯಾಗ್ ವಿತರಣಾ ಕಾರ್ಯಕ್ರಮ ಆ. 4ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಐ.ಎ.ಎಸ್. ಅಧಿಕಾರಿ ಸದಾಶಿವ ಪ್ರಭು ಮಕ್ಕಳಿಗೆ ಬ್ಯಾಗ್ ವಿತರಿಸಿ ಶುಭಹಾರೈಸಿದರು.
ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಸುಷ್ಮಾ, ಗ್ರಾ. ಪಂ. ಮಾಜಿ ಅಧ್ಯಕ್ಷ ಸುಕೇಶ್ ಹೆಗ್ಡೆ, ಅರುಣ್ ಕುಮಾರ್ ಹೆಗ್ಡೆ, ಪುರಂದರ ನಾಯಕ್, ಸಂಜೀವ ಪೂಜಾರಿ, ಮೋಹನ್ ದಾಸ್ ನಾಯಕ್, ಚಂದ್ರಕಾಂತ ಹೆಗ್ಡೆ ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಶ್ವೇತಾ ಸತೀಶ್ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬಾಲವಿಕಾಸ ಸಮಿತಿಯವರು, ಪೋಷಕರು, ಸ್ತ್ರೀಶಕ್ತಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
















