ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್‌ಗೆ ಮತ್ತೆ ಸಂಕಷ್ಟ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ ದರ್ಶನ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಎ-14 ಪ್ರದೋಷ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ.

ನಾನು ಸತ್ಯವನ್ನೇ ಹೇಳುತ್ತೇನೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೋಷ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಇಂದು ಮಧ್ಯಾಹ್ನ 12 ಗಂಟೆಗೆ ನ್ಯಾಯಾಧೀಶರ ಮುಂದೆ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಯನ್ನು ವಿಚಾರಣೆಗೆ ಹಾಜರುಪಡಿಸಲಾಗುವುದು.

ನ್ಯಾಯಾಧೀಶರ ಮುಂದೆ ಹಾಜರಾಗಿ ಪ್ರಕರಣದಲ್ಲಿ ಘಟನಾವಳಿಗಳ ಬಗ್ಗೆ ಆರೋಪಿ ಹೇಳಲಿದ್ದಾನೆ. ಈ ಹಿಂದೆ ವಿನಯ್ ಕುಲಕರ್ಣಿ ಪ್ರಕರಣದಲ್ಲಿ ಬಸವರಾಜ್ ಮುತ್ತಗಿ ಮಾಫಿ ಸಾಕ್ಷಿಯಾಗಿದ್ದ. ಹೀಗಾಗಿ, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಆಗಿತ್ತು. ಈಗ ದರ್ಶನ್ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿದ್ದಾನೆ.































error: Content is protected !!
Scroll to Top