ಮುದರಂಗಡಿ ಪಂಚಾಯತ್‌ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆ

ಪಡುಬಿದ್ರಿ : ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಪ್ರಿನ್ಸ್‌ ಪಾಯಿಂಟ್‌ ಮಾಲಕ, ಗುತ್ತಿಗೆದಾರ ಡೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಕುರಿತು ವರದಿಯಾಗಿದೆ. ಆ.7ರಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್‌ ಅವರಿಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.























































error: Content is protected !!
Scroll to Top