ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಎರಡು ಪ್ರಮುಖ ಸೇತುವೆಗಳ ನಿರ್ಮಾಣಕ್ಕಾಗಿ ರೂ 2.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
2.05 ಕೋಟಿ ರೂ. ವೆಚ್ಚದಲ್ಲಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಬಡಾ ತಿಂಗಳೆ-ತಿಂಗಳೆ ಗರಡಿ ಬಳಿ ಹಾಗೂ ಕಾರ್ಕಳ ತಾಲೂಕು ಈದು ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರಲ್ ಬೆಟ್ಟು ಪೂಂಜಾಜೆ ಕಾವೆರಡ್ಕ ಎಂಬಲ್ಲಿ ಸೇತುವೆ/ ಕಾಲುಸಂಕಗಳು ನಿರ್ಮಾಣ ಆಗಲಿದೆ.
ಸೇತುವೆ/ ಕಾಲುಸಂಕಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಪತ್ರ ಮುಖೇನ ಮನವಿ ಮಾಡಲಾಗಿತ್ತು. ಇದರ ಪರಿಣಾಮವಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 2.05 ಕೋಟಿ ರೂ. ಅನುದಾನ ಮಂಜೂರಾಗಿದ್ದು ಆದಷ್ಟು ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



























