ಪರಿಸರ ಸೂಕ್ಷ್ಮಪ್ರದೇಶ ಕರಡು ಅಧಿಸೂಚನೆಯಿಂದ ಆತಂಕದ ವಾತಾವರಣ ನಿರ್ಮಾಣ

ಕಾರ್ಕಳ : ಕೇಂದ್ರ ಸರಕಾರವು ಪರಿಸರ ಸೂಕ್ಷ್ಮ ವಲಯವನ್ನು ನಿಗದಿಪಡಿಸಿ ಏಳನೇ ಬಾರಿಗೆ ಕರಡು ಅಧಿಸೂಚನೆ ಪ್ರಕಟಿಸಿದ್ದು ಪಶ್ಚಿಮಘಟ್ಟದ ಗ್ರಾಮಗಳ ರೈತರು, ಬುಡಕಟ್ಟು ಜನಾಂಗಗಳು, ಸಾರ್ವಜನಿಕರಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಈ ಬಗ್ಗೆ ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಿ ಜನರ ಆತಂಕವನ್ನು ನಿವಾರಿಸಬೇಕು ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹಿಸಿದ್ದಾರೆ.

ಈ ಹಿಂದೆ 2024ರಲ್ಲಿ ಪ್ರಕಟವಾಗಿದ್ದ ಕರಡು ಅಧಿಸೂಚನೆಯಲ್ಲಿ ಬಹುತೇಕ ಅಂಶಗಳೇ ಈ ಬಾರಿಯ ಕರಡಿನಲ್ಲೂ ಇವೆ. ಆದುದರಿಂದ ರಾಜ್ಯ ಸರ್ಕಾರವು ಜನರ ಆತಂಕ ನಿವಾರಿಸುವ ಉದ್ದೇಶದಿಂದ ಭೌತಿಕ ಸರ್ವೇಯನ್ನು ನಡೆಸಿ ಜನವಸತಿ ಪ್ರದೇಶಗಳನ್ನು ವಿರಹಿತಗೊಳಿಸಿ ಕೃಷಿ, ತೋಟಗಾರಿಕೆ ಚಟುವಟಿಕೆಗಳು, ಜೀವನೋಪಾಯ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಯೋಜನೆಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಬೇಕು ಎಂದಿರುವ ಅವರು ಕರಡು ಅಧಿಸೂಚನೆ ನಿಗದಿಪಡಿಸಿದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ಸಭೆಗಳನ್ನು ನಡೆಸಿ ಕೂಡಲೇ ಆಕ್ಷೇಪಣೆ ಸಲ್ಲಿಸಲು ಗ್ರಾಮಸ್ಥರಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ.





























error: Content is protected !!
Scroll to Top