ಕಾರ್ಕಳ : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ನೇತೃತ್ವದಲ್ಲಿ ಕಾರ್ಕಳ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದಶಿಯವರ ಸಮಾಲೋಚನಾ ಸಭೆ ಆ. 7ರಂದು ಪ್ರಕಾಶ್ ಹೊಟೇಲ್‌ನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಸಂಘಗಳ ಅಭಿವೃದ್ಧಿ ಕುರಿತು ಸಲಹೆ ನೀಡಿದರು. ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್ ಹೈನುಗಾರರಿಗೆ ಸಿಗುವ ಸವಲತ್ತುಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸೆಲ್ಸಿ ಮತ್ತು ಪಿಯುಸಿ ಅಧಿಕ ಅಂಕ ಪಡೆದ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಹೈನುಗಾರರ ಮಕ್ಕಳನ್ನು ಮತ್ತು ತಾಲೂಕು ಮಟ್ಟದ ಉತ್ತಮ ಸಂಘ, ಹಸಿರು ಮೇವು ಅಭಿವೃದ್ಧಿ ಪಡಿಸಿದ ಉತ್ತಮ ಹೈನುಗಾರರು, ಉತ್ತಮ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು. ಒಕ್ಕೂಟ ನಿರ್ದೇಶಕರಾದ ಪ್ರಕಾಶ್ಚಂದ್ರ ಶೆಟ್ಟಿ, ಮಮತ ಆರ್. ಶೆಟ್ಟಿ, ಸಿವಮಾತಿ ಕೆ., ವ್ಯವಸ್ಥಾಪಕ ನಿರ್ದೇಶಕ ಜೆ. ಜಯಕುಮಾರ್ ಹಾಗೂ ಒಕ್ಕೂಟದ ಅಧಿಕಾರಿಗಳು ಉಪಸ್ಥಿತರಿದ್ದರು. ಒಕ್ಕೂಟದ ನಿರ್ದೇಶಕ ಸುಧಾಕರ ಶೆಟ್ಟಿ ಮುಡಾರು ಸ್ವಾಗತಿಸಿದರು. ವಿಸ್ತರಣಾಧಿಕಾರಿ ಯಶವಂತ ಕಾರ್ಯಕ್ರಮ ನಿರೂಪಿಸಿ, ವ್ಯವಸ್ಥಾಪಕ ರವಿರಾಜ್ ಉಡುಪ ವಂದಿಸಿದರು.














