ಕಾರ್ಕಳ : ಜೇಸಿಐ ಭಾರತದ ವಲಯ ತರಬೇತುದಾರರಾಗಿ ಮನು ಶೆಟ್ಟಿ ಇನ್ನಾ ಆಯ್ಕೆಯಾಗಿದ್ದಾರೆ.
ಕಾಪುವಿನಲ್ಲಿ ನಡೆದ ಜೆಸಿಐ ಭಾರತದ ವಲಯ ತರಬೇತುದಾರರ ಮೂರು ದಿನಗಳ ಕಾರ್ಯಾಗಾರದಲ್ಲಿ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೊದಲಾದ 7 ಜಿಲ್ಲೆಗಳನ್ನೊಳಗೊಂಡ 3 ವಲಯಗಳ ಸುಮಾರು 35 ಜೇಸಿ ಸ್ಪರ್ಧಿಗಳು ಭಾಗವಹಿಸಿದ್ದು, ಜೇಸಿಐ ಪಡುಬಿದ್ರಿಯ ಸದಸ್ಯೆ ಮನು ಶೆಟ್ಟಿ ಇನ್ನಾ ಅವರನ್ನು ಜೇಸಿಐ ಭಾರತದ ವಲಯ ತರಬೇತುದಾರರಾಗಿ ಆಯ್ಕೆಯಾದರು. ಜೇಸಿಐ ಭಾರತದ ವಲಯ 15ರ ಪೂರ್ವ ವಲಯಾದ್ಯಕ್ಷ ಇನ್ನಾ ಉದಯ ಕುಮಾರ್ ಶೆಟ್ಟಿ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರೇಶ್ಮಾ ಉದಯ ಶೆಟ್ಟಿ ಯವರ ಪುತ್ರಿ ಮನು ಶೆಟ್ಟಿಯವರು ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದು, ವಲಯ ಹದಿನೈದರ ಅತಿ ಕಿರಿಯ ವಯಸ್ಸಿನ ತರಬೇತುದಾರರೆನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಜೇಸಿಐ ಇಂಡಿಯಾ ವಲಯ ತರಬೇತುದಾರರಾಗಿ ಮನು ಶೆಟ್ಟಿ ಇನ್ನಾ














