ಕಾರ್ಕಳ : ನಕ್ರೆ ಸರಕಾರಿ ಪ್ರೌಢಶಾಲೆಯಲ್ಲಿ ಆ. 5ರಂದು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ನಡೆಯಿತು. ನಿವೃತ್ತ ಶಿಕ್ಷಕ ಜಾರ್ಜ್ ಕ್ಯಾಸ್ತಲಿನೊ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಟಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷೆ ಸುಮಲತಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರು, ತಾಲೂಕು ಕ್ರೀಡಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದ ಯೋಗ ಪಟು ನರೇಂದ್ರ ಕಾಮತ್ ಸ್ಪರ್ಧೆಯ ನಿಯಮಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಯೋಗ ಗುರು ಅಶೋಕ್ ಅವರು ಬರೆದ ಸೂರ್ಯಾಯ ನಮಃ ಪುಸ್ತಕವನ್ನು ಶಾಲೆಗೆ ಹಸ್ತಾಂತರಿಸಲಾಯಿತು. ವೇದಿಕೆಯಲ್ಲಿ ಅಂತೋನಿ ಡಿಸೋಜ, ಶಶಿಮಣಿ, ತಾಲೂಕು ಪ್ರಾಥಮಿಕ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ವಸಂತ್ ನಾಯ್ಕ್, ಕಾರ್ಕಳ ಸರಕಾರಿ ನೌಕರ ಸಂಘದ ರಾಜಾರಾಮ್ ಶೇರ್ವೆಗಾರ್, ಹಿರಿಯ ಶಿಕ್ಷಕ ಶಂಕರ್ ಪೂಜಾರಿ, ಎಸ್‌ಡಿಎಂಸಿಯ ನಿಕಟ ಪೂರ್ವ ಅಧ್ಯಕ್ಷ ನವೀನ್ ಚಂದ್ರ, ಸುಮನಾ ನಾಯ್ಕ, ಹಳೆ ವಿದ್ಯಾರ್ಥಿ ವೈಲೆಟ್, ಜೈ ಶಂಕರ್, ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕ ವಿಜಯ ವಿಷ್ಣು ಹೆಗ್ಡೆ ಸ್ವಾಗತಿಸಿದರು. ಶಿಕ್ಷಕರಾದ ಲತಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಮಂಜುನಾಥ ಪ್ರಭು ವಂದಿಸಿದರು. ಸಂತೋಷ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿದರು. ಸುಮಾರು 25 ಶಾಲೆಯ 130 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ನಕ್ರೆ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ














