ಕಾರ್ಕಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ, ಉಡುಪಿ ಜಿಲ್ಲೆಯ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಚಿವ ಯು.ಟಿ. ಖಾದರ್ ಇಂದು (ಆ. 8) ಕಾರ್ಕಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಉಂಟಾಗಿರುವ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಬಳಿಕ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಮಳೆ ಹಾನಿ ಪರಿಶೀಲನಾ ಸಭೆ ನಡೆಯಲಿದೆ.
ಇಂದು ಸಚಿವ ಯು.ಟಿ. ಖಾದರ್ ಕಾರ್ಕಳ ಭೇಟಿ














