ಹೋಟೆಲ್‌ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ : ಯು.ಟಿ. ಖಾದರ್

ಬೆಂಗಳೂರು : ಮುಂದಿನ ದಿನಗಳಲ್ಲಿ ಹೋಟೆಲ್‌ಗಳ ಅಡುಗೆ ಮನೆಯಲ್ಲೂ ಗ್ರಾಹಕರು ನೋಡಬಹುದಾದ ರೀತಿಯಲ್ಲಿ ಕ್ಯಾಮೆರಾ ಅಳವಡಿಸುವ ವ್ಯವಸ್ಥೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹೋಟೆಲ್‌ಗಳಲ್ಲಿ ಆಹಾರ ಹೇಗೆ ತಯಾರಾಗುತ್ತಿದೆ, ಸ್ವಚ್ಛತೆ ಕಾಪಾಡಲಾಗುತ್ತಿದೆಯೇ ಎಂಬುದರ ಬಗ್ಗೆ ಗ್ರಾಹಕರಿಗೂ ತಿಳಿಯುವಂತಿರಬೇಕು. ಈ ನಿಟ್ಟಿನಲ್ಲಿ ಮತ್ತಷ್ಟು ಕಾನೂನು ಮತ್ತು ಮಾರ್ಗಸೂಚಿಗಳನ್ನು ತರಲಾಗುವುದು ಎಂದು ತಿಳಿಸಿದ್ದಾರೆ.

ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ ನೀಡುವುದು ಎಲ್ಲರ ಜವಾಬ್ದಾರಿ. ಆಹಾರದ ಗುಣಮಟ್ಟದಲ್ಲಿ ಯಾವುದೇ ಲೋಪ ಕಂಡುಬಂದರೆ ಹೋಟೆಲ್‌ಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ನಗರದ ಹಲವು ದೊಡ್ಡ ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಆಹಾರ ಪದಾರ್ಥಗಳ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಲ್ಯಾಬ್‌ನಿಂದ ವರದಿ ಬಂದ ಬಳಿಕ ನಿಯಮ ಉಲ್ಲಂಘಿಸಿರುವ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ನಿಯಮ ಪಾಲನೆ ಮಾಡದ ಹೋಟೆಲ್‌ಗಳ ವಿರುದ್ಧ ಮೊದಲ ಹಂತದಲ್ಲಿ ನೋಟಿಸ್‌ ನೀಡಲಾಗುವುದು. ಇದರ ಬಳಿಕವೂ ನಿಯಮ ಉಲ್ಲಂಘನೆ ಮುಂದುವರಿದರೆ ಹೋಟೆಲ್‌ಗಳನ್ನು ಮುಲಾಜಿಲ್ಲದೆ ಬಂದ್ ಮಾಡಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗದೆ ಕೆಲಸ ಮಾಡಬೇಕು ಎಂದು ಸೂಚಿಸಿರುವುದಾಗಿ ಅವರು ಹೇಳಿದ್ದಾರೆ. ಗ್ರಾಹಕರಿಗೆ ಮೋಸ ಮಾಡುವ ಹೋಟೆಲ್‌ಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಖಡಕ್ ಎಚ್ಚರಿಕೆ ನೀಡಿದ್ದಾರೆ.























































error: Content is protected !!
Scroll to Top