ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 9ರಂದು ಮಾಳದಲ್ಲಿ ನಡೆದಿದೆ. ನವೀನ (42) ನೇಣಿಗೆ ಶರಣಾದವರು. ಇವರು ಮದ್ಯಪಾನ ಮಾಡಿ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದರು. ಇದೇ ವಿಚಾರವಾಗಿ ಹೆಂಡತಿ ಜಾನಕಿ ಅವರು 2 ತಿಂಗಳ ಹಿಂದೆ ಮನೆ ಬಿಟ್ಟು ತವರು ಮನೆಯಾದ ಸುಳ್ಯಕ್ಕೆ ಹೋಗಿದ್ದಾರೆ. ನವೀನ್‌ ಅವರು ಆ. 9 ತಮ್ಮ ಮನೆಯ ಬಳಿಯಿರುವ ಹಾಡಿಯಲ್ಲಿ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಮದ್ಯಪಾನ ಮಾಡುವ ಚಟದಿಂದ ಅಥವಾ ಇನ್ಯಾವುದೋ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಅಣ್ಣ ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.























































error: Content is protected !!
Scroll to Top