ಆ. 11-12 : ಉಡುಪಿಯಲ್ಲಿ ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ

ಉಡುಪಿ : ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವಾಲಯದ ಅಡಿಯಲ್ಲಿ ಬರುವ ಮಂಗಳೂರಿನ MSME ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿಯು, ಉಡುಪಿಯ ಜಿಲ್ಲಾ ಕೈಗಾರಿಕಾ ಕೇಂದ್ರ DSIA ಮತ್ತು UCCI ಹಾಗೂ ಪವರ್‌ ಸಂಸ್ಥೆಯ ಸಹಯೋಗದೊಂದಿಗೆ ಆ. 11 ಮತ್ತು 12ರಂದು ಉಡುಪಿಯ ಟೌನ್ ಹಾಲ್‌ನಲ್ಲಿ ‘ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ’ವನ್ನು (Vendor Development Programme) ಆಯೋಜಿಸಿದೆ.

ಈ ಕಾರ್ಯಕ್ರಮದ ಪ್ರಮುಖ ಉದ್ದೇಶವು ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಮಾರುಕಟ್ಟೆ ಬೆಂಬಲವನ್ನು ಒದಗಿಸುವುದಾಗಿದೆ. ಇದರ ಮೂಲಕ ಸಾರ್ವಜನಿಕ ವಲಯದ ಉದ್ಯಮಗಳು ಸೂಕ್ತ ಮಾರಾಟಗಾರರನ್ನು ಗುರುತಿಸಬಹುದು ಮತ್ತು ಸಣ್ಣ ಉದ್ಯಮಗಳು ತಮ್ಮ ಉತ್ಪನ್ನಗಳಿಗೆ ಖರೀದಿದಾರರನ್ನು ಕಂಡುಕೊಳ್ಳಬಹುದು. ಕಾರ್ಯಕ್ರಮದ ಅಂಗವಾಗಿ, MRPL, KIOCL ಲಿಮಿಟೆಡ್, NMPA, ICAR-CPCRI, ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್, BEL, BEML, NSIC ಮುಂತಾದ ಸಾರ್ವಜನಿಕ ವಲಯದ ಉದ್ಯಮಗಳು ಹಾಗೂ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕರ್ನಾಟಕ ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆಗಳು ತಮ್ಮ ಖರೀದಿ ಅಗತ್ಯಗಳನ್ನು ಮಳಿಗೆಗಳಲ್ಲಿ ಪ್ರದರ್ಶಿಸಲಿವೆ. ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಮಾರಾಟಗಾರರ ನೋಂದಣಿ, ಹೊರಗುತ್ತಿಗೆ ನೀಡಲಾಗುವ ಉತ್ಪನ್ನಗಳು/ಸೇವೆಗಳು, ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸಾಲ ಸೌಲಭ್ಯಗಳಂತಹ ವಿಷಯಗಳ ಕುರಿತು ತಾಂತ್ರಿಕ ವಿಚಾರ ಸಂಕಿರಣವನ್ನೂ ಆಯೋಜಿಸಲಾಗುವುದು. ಸಣ್ಣ ಉದ್ಯಮಗಳಿಗೆ ತಮ್ಮ ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳಲು ಹಾಗೂ ಉದ್ಯಮಶೀಲರಾಗಲು ಬಯಸುವವರಿಗೆ ಸರ್ಕಾರಿ ಯೋಜನೆಗಳು ಮತ್ತು ಉದ್ದೇಶಿತ ಉದ್ಯಮಗಳಿಗೆ ಸೂಕ್ತ ಉತ್ಪನ್ನಗಳ ಆಯ್ಕೆಯ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಉಚಿತ ಪ್ರವೇಶವಿದ್ದು, ಹೆಚ್ಚಿನ ವಿವರಗಳಿಗಾಗಿ MSME DFO (0824-2217696) ಕಚೇರಿಯನ್ನು ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.























































error: Content is protected !!
Scroll to Top