ಉಡುಪಿ : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ಅಣ್ಣಾಮಲೈ, ಬಳಿಕ ಶ್ರೀಮಠದ ಪ್ರಸಾದ ಸ್ವೀಕರಿಸಿದರು. ಈ ವೇಳೆ ಮಠದ ವತಿಯಿಂದ ಪ್ರಸಾದ ಹಾಗೂ ಕೃಷ್ಣದೇವರ ಭಾವಚಿತ್ರ ನೀಡಿ ಅವರನ್ನು ಗೌರವಿಸಲಾಯಿತು.
ಅಣ್ಣಾಮಲೈ ಅವರು ಈ ಹಿಂದೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಅವರು ಮಠಕ್ಕೆ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ಅವರನ್ನು ಭೇಟಿಯಾಗಲು ಅನೇಕ ಅಭಿಮಾನಿಗಳು ಆಗಮಿಸಿದ್ದರು.

ಬಿಜೆಪಿಯನ್ನು ತೊರೆದು ‘ವೀ ದ ಲೀಡರ್ಸ್ ಮೂವ್‌ಮೆಂಟ್’ ಆರಂಭಿಸಿದ ಬಳಿಕ ಅಣ್ಣಾಮಲೈ ಉಡುಪಿಗೆ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ. ಈ ಹಿಂದೆ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.














