ಬೆಂಗಳೂರು : ಹೋಟೆಲ್ ಕಿಚನ್‌ಗಳ ಮೇಲೆ ರೈಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಆರೋಗ್ಯ ಸಚಿವ ಯುಟಿ ಖಾದರ್ ಅವರು ಸೂಚನೆ ನೀಡಿದ್ದಾರೆ.
ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಹಾಸ್ಟೆಲ್‌ಗಳು, ಖಾಸಗಿ ಹಾಸ್ಟೆಲ್‌ಗಳು ಮತ್ತು ಸಹಕಾರಿ ಹಾಸ್ಟೆಲ್‌ಗಳಲ್ಲಿನ ಆಹಾರ ತಪಾಸಣೆ ಮಾಡಲಾಗುವುದು. ಈ ವೇಳೆ ಆಹಾರ ಗುಣಮಟ್ಟ, ಸ್ವಚ್ಛತೆ ಮತ್ತು ಆಹಾರ ಪದಾರ್ಥಗಳ ಸಂಗ್ರಹಣೆ ಬಗ್ಗೆ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪಿಜಿಗಳಲ್ಲಿಯೂ ಕೂಡ ಟೆಸ್ಟ್ ಮಾಡಿಸುತ್ತೇವೆ. ಎಲ್ಲಾ ಕಡೆಯ ಹಾಸ್ಟೆಲ್, ಪಿಜಿಯಲ್ಲಿ ಫುಡ್ ಟೆಸ್ಟ್ ಮಾಡಿಸುತ್ತೇವೆ. ಇದರ ಜೊತೆಗೆ ಕ್ಯಾಂಟಿರಿಂಗ್‌ಗಳಲ್ಲಿಯೂ ಟೆಸ್ಟ್ ಮಾಡಿಸುತ್ತೇವೆ. ಬೆಂಗಳೂರು ಕೇಂದ್ರದಲ್ಲಿ ದಾಳಿ ಆಗುತ್ತಿದೆ. ಜಿಲ್ಲಾ ಕೇಂದ್ರದಲ್ಲಿಯೂ ಕೂಡ ಎಚ್ಚೆತ್ತುಕೊಳ್ಳಬೇಕು. ಯಾವುದೇ ಕಾರಣಕ್ಕೂ ತಪಾಸಣೆ ಮಾಡದೇ ಇರಲ್ಲ. ಬರುವಂತಹ ಜನರಿಗೆ ಗುಣಮಟ್ಟದ ಆಹಾರ ಕೊಡಬೇಕು. ಕೊಟ್ಟ ದುಡ್ಡಿಗೆ ಜನರಿಗೆ ಮೋಸ ಮಾಡಬಾರದು. ನಿಯಮ ಉಲ್ಲಂಘನೆಗೆ ತಕ್ಕಂತೆ ಕ್ರಮ ವಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.











































