80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

ಮೊಳಗಿದ ವಂದೇ ಮಾತರಂ, ರಾಷ್ಟ್ರಗೀತೆ

ಬೆಂಗಳೂರು: ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಧ್ವಜಾರೋಹಣ ನೆರವೇರಿಸಿದರು.
ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್‌ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೆರವೇರಿಸಿದ ಧ್ವಜಾರೋಹಣ ಇದಾಗಿದೆ. ಸಿಎಂ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ವಂದೇ ಮಾತರಂ ಗೀತೆ ಹಾಗೂ ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಪ್ರಸ್ತುತಿ ಪಡಿಸಲಾಯಿತು.
ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಡಿಕೆ ಶಿವಕುಮಾರ್ ತೆರೆದ ಜೀಪಿನಲ್ಲಿ ಗೌರವ ವಂದನೆ ಸ್ವೀಕರಿಸಿದರು.‌ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು.
ಸಿಎಂ ಭಾಷಣದ ಬಳಿಕ ಮಾಣೆಕ್ ಷಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.





























































































































error: Content is protected !!
Scroll to Top