ಆ. 21 : ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಜನ್ಮದಿನದ ಅಂಗವಾಗಿ ಆ. 21ರಂದು ಕಾರ್ಕಳ ಗಣಿತನಗರ ಜ್ಞಾನಸುಧಾ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಹಾಗೂ ಹಳೆವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಡೆಯುವ ರಕ್ತದಾನ ಶಿಬಿರವನ್ನು ಕಸ್ತೂರ್ಬಾ ಹಾಸ್ಪಿಟಲ್ ರಕ್ತನಿಧಿ ಹಾಗೂ ಎಚ್.ಬಿ.ಟಿ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಡಾ. ಗಣೇಶ್ ಮೋಹನ್ ಉದ್ಘಾಟಿಸಲಿದ್ದಾರೆ. ಶಿಬಿರ ಬೆಳಿಗ್ಗೆ 9.30ರಿಂದ 1 ಗಂಟೆಯವರೆಗೆ ನಡೆಯಲಿದೆ.

ಸನ್ಮಾನ
ಮಧ್ಯಾಹ್ನ 3 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ವಿಶೇಷ ಮಕ್ಕಳ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧ್ಯಾಪಕರನ್ನು ಸನ್ಮಾನಿಸಲಾಗುವುದು. ಅಜೆಕಾರು ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ನ ಆಡಳಿತ ಮಂಡಳಿ ಸದಸ್ಯ, ತಾಜ್‌ ಗ್ಲಾಸ್‌ ಮಾಲಕ ಗಣಪತಿ ಪೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಕಳ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















































error: Content is protected !!
Scroll to Top