ಸಾಧಕರಿಗೆ ಸನ್ಮಾನ – 2 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ
ಕಾರ್ಕಳ : ಉನ್ನತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ಉನ್ನತಿ ತಂಡದ 5ನೇ ವರ್ಷದ ಸಂಭ್ರಮಚಾರಣೆ ಆ.15ರಂದು ಬೈಲೂರು ಮೈನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಉನ್ನತಿ ಚಾರಿಟೇಬಲ್ ಟ್ರಸ್ಟ್ ಪ್ರತಿ ವರ್ಷ ಆಗಸ್ಟ್ 15ರಂದು ಕಾರ್ಕಳ ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯೊಂದಿಗೆ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸುತ್ತಿದೆ. ಈ ಬಾರಿ ಬೈಲೂರು ಮೈನ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಯಮಿ ರಾಮರಾಯ ಕಿಣಿ ನೆರವೇರಿಸಿದರು.

ಸಾಧಕರಿಗೆ ಸನ್ಮಾನ
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬೈಲೂರಿನ ಸಾಧಕರನ್ನು ಸನ್ಮಾನಿಸಲಾಯಿತು. ಕ್ಯಾನ್ಸರ್ ಔಷಧ ಸಂಶೋಧಕ ಡಾ. ಜಿತೇಂದ್ರ ಕಿಣಿ, ವೈದ್ಯ ಡಾ. ಶಶಿಕಿರಣ್ ಆಚಾರ್, ನಿವೃತ್ತ ಮುಖ್ಯ ಶಿಕ್ಷಕಿ ಕೆ. ಅರುಂಧತಿ ಶೆಟ್ಟಿ, ಕಾಷ್ಠಶಿಲ್ಪಿ ಹಾಗೂ ನಾಟಿ ವೈದ್ಯ ಜನಾರ್ಧನ ಆಚಾರ್ಯ, ಕೃಷಿಕ ಶಿವಾನಂದ ಶೆಟ್ಟಿ ಕೌಡೂರು, ನಿವೃತ್ತ ಹೆಡ್ ಕಾನ್ಸ್‌ಟೇಬಲ್ ವಿಜಯ ದೇವಾಡಿಗ, ಬೈಲೂರು ಮೈನ್ ಶಾಲೆಯ ಶಿಕ್ಷಕ ಮೊಯ್ದಿನ್ ಎಸ್.ಕೆ., ಅಗ್ನಿವೀರ್ ಸಾಗರ್ ಆಚಾರ್ಯ, ರಾಷ್ಟ್ರ ಮಟ್ಟದ ವಾಲಿಬಾಲ್ ಪಟು ಮಣಿಕಂಠ ಹಾಗೂ ರಾಷ್ಟ್ರ ಮಟ್ಟದ ವೇಟ್‌ಲಿಫ್ಟಿಂಗ್ ಪಟು ಜೀವಿತಾ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿವೇತನ ವಿತರಣೆ
ಉನ್ನತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾಲೂಕಿನ 32 ವಿದ್ಯಾರ್ಥಿಗಳಿಗೆ ಒಟ್ಟು 2,00,000 ರೂ. ಮೊತ್ತದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಅಲ್ಲದೆ, ಎಸ್ಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 15 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಉನ್ನತಿ ಟ್ರಸ್ಟ್‌ನ ವೆಬ್‌ಸೈಟ್ ಬಿಡುಗಡೆ
ಚಲನಚಿತ್ರನಟ ಪೃಥ್ವಿ ಅಂಬರ್ ಅವರು ಉನ್ನತಿ ಚಾರಿಟೇಬಲ್ ಟ್ರಸ್ಟ್‌ನ ಅಧಿಕೃತ ವೆಬ್‌ಸೈಟ್‌ನ್ನು ಲೋಕಾರ್ಪಣೆ ಮಾಡಿದರು.
ವಾಸುದೇವ ಶೆಟ್ಟಿಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಚಿತ್ರನಟ ಪೃಥ್ವಿ ಅಂಬರ್, ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿನಾಯಕ ಜೋಗ್, ಉದ್ಯಮಿ ಪ್ರಶಾಂತ್ ಶೆಟ್ಟಿ ಗುತ್ತುಮನೆ ಬೈಲೂರು, ಬೈಲೂರು ಮೈನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್‌ನ ಅವಿನಾಶ್ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಆಶಾ ಭಾನು ಹಾಗೂ ಉನ್ನತಿ ತಂಡದ ಸದಸ್ಯೆ ಲಾವಣ್ಯ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉನ್ನತಿ ತಂಡದ ಸದಸ್ಯರು, ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉನ್ನತಿ ತಂಡದ ಸದಸ್ಯರಾದ ವಿನೋದ್ ಶೆಟ್ಟಿ ಸ್ವಾಗತಿಸಿ, ಕೌಶಿಕ್ ಅಮೀನ್ ಮುನಿಯಾಲು ಕಾರ್ಯಕ್ರಮ ನಿರೂಪಿಸಿದರು. ಬೈಲೂರು ಮೈನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುಮಾ ವಂದಿಸಿದರು.


































