ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ

ಬೆಂಗಳೂರು : ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ 1.20 ಲಕ್ಷ ರೂ.ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದೇ ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಜನರು ಪಿಂಚಣಿ ಸೌಲಭ್ಯದಿಂದ ಹೊರಗೆ ಉಳಿದಿದ್ದರು. ಈಗ 1.20 ಲಕ್ಷ ರೂ.ಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಅಂತ ಸ್ಪಷ್ಟಪಡಿಸಿದ್ದಾರೆ.

































































error: Content is protected !!
Scroll to Top