ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ಕಾರ್ಕಳದ ವರ್ಧಮಾನ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ 14 ಮತ್ತು 17ರ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಸಾನಿಕ ಎಸ್. ಪೂಜಾರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಕಾರ್ಕಳ ಶಿವಪುರದ ಸತೀಶ್ ಪೂಜಾರಿ ಹಾಗೂ ಉಷಾ ದಂಪತಿಯ ಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಕರಾಟೆ ಸ್ಪರ್ಧೆಯಲ್ಲಿ ಜ್ಞಾನಸುಧಾದ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ



















