ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಸಂಯುಕ್ತ ಆಶ್ರಯದಲ್ಲಿ ಆ.28ರಂದು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ಜಾತಿ ಅಸಮಾನತೆಯ ವಿರುದ್ದ ಜನಜಾಗೃತಿ ನಡೆಸಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ ಬ್ರಹ್ಮ ಶ್ರೀ ನಾರಾಯಣಗುರುಗಳ ಜೀವನವು ನಮಗೆಲ್ಲರಿಗೂ ಮಾದರಿಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದುಳಿದ ವರ್ಗಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು ನಿಗಮಗಳ ಮೂಲಕ ವಿವಿಧ ಸಮುದಾಯದ ಅಭಿವೃದ್ಧಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ರಚನೆಯಾದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನಮ್ಮವರೇ ಆದ ಮಂಜುನಾಥ ಪೂಜಾರಿ ಮುದ್ರಾಡಿ ಅವರು ನೇಮಕಗೊಂಡಿರುವುದು ಸಂತಸದ ಸುದ್ದಿ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ನಾರಾಯಣ ಗುರುಗಳ ತತ್ವ ಸಂದೇಶ ಎಂದಿಗೂ ಜೀವಂತ. ಅವರ ಸಿದ್ದಾಂತದಂತೆ ಕಂದಾಚಾರಗಳನ್ನು, ಮೂಡನಂಬಿಕೆಯನ್ನು ಹೊಗಲಾಡಿಸಲು ಹಿರಿಯ ಕಾಂಗ್ರೆಸ್ ನಾಯಕರಾದ ಜನಾರ್ಧನ ಪೂಜಾರಿಯವರು ಕಾರ್ಯನಿರ್ವಹಿಸಿರುವುದು ಸದಾ ಸ್ಮರಣೀಯ ಎಂದು ಹೇಳಿದರು.

ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧಿಯವರೂ ನಾರಾಯಣ ಗುರುಗಳನ್ನು ಭೇಟಿಯಾಗಿ ಪ್ರೇರಣೆಯನ್ನು ಪಡೆದಿರುವುದು ನಾರಾಯಣ ಗುರುಗಳ ತತ್ವಗಳ ಸಾರವನ್ನು ಸೂಚಿಸುತ್ತದೆ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಗ್ಯಾರಂಟಿ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ ಸಂದರ್ಭೋಚಿತವಾಗಿ ಮಾತನಾಡಿದರು.
ಸಾಧಕರಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಾದ ಸುಂದರ ಮೊಯಿಲಿ ಕುಕ್ಕುಂದೂರು, ಜಯ ಪೂಜಾರಿ ಈದು, ಶಂಕರ ಕುಲಾಲ್ ಸಾಣೂರು, ಸಾಧು ಭಂಡಾರಿ ನಿಂಜೂರು, ನಾಗೇಶ್ ಆಚಾರ್ಯ ಎರ್ಲಪಾಡಿ, ಶಾರದಾ ಮಡಿವಾಳ ಮಾಳ, ಶೋಬಾ ದಿನೇಶ್ ಶೆಟ್ಟಿಗಾರ್, ರಮಾನಂದ ನಾಯಕ್ ಹಿರ್ಗಾನ, ಜಯ ಭಂಡಾರಿ ಬೈಲೂರು, ವಿಠಲ ಪೂಜಾರಿ ಮಿಯ್ಯಾರು ಅವರನ್ನು ಸನ್ಮಾನಿಸಲಾಯಿತು. ಸನ್ಮಾನಿತರಾದ ಶಾರದಾ ಮಡಿವಾಲ ಮಾಳ ಅವರು ಪಾರ್ದನವನ್ನು ಹಾಡಿ ಎಲ್ಲರ ಗಮನ ಸೆಳೆದರು.
ವೇದಿಕೆಯಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ರಾಜ್ಯ ಕಿಸಾನ್ ಘಟಕದ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಪುರಸಭೆಯ ಮಾಜಿ ಅದ್ಯಕ್ಷ ಸುಭಿತ್ ಎನ್.ಆರ್., ಪ್ರಚಾರ ಸಮಿತಿಯ ಅನಿಲ್ ಪೂಜಾರಿ ಮಾಳ, ನಗರ ಹಿಂದುಳಿದ ವರ್ಗಗಳ ಘಟಕದ ಹೇಮಂತ್ ಆಚಾರ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ರಾಜ್ಯ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಪ್ರಭಾಕರ ಬಂಗೇರ, ಮಾಲಿನಿ ರೈ, ಅನಿತಾ ಡಿಸೋಜ ಬೆಳ್ಮಣ್ ಉಪಸ್ಥಿತರಿದ್ದರು.
ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಸ್ವಾಗತಿಸಿದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿ, ಬ್ಲಾಕ್ ಉಪಾಧಕ್ಷ ಜಾರ್ಜ್ ಕ್ಯಾಸ್ತಲಿನೊ ವಂದಿಸಿದರು.



















