ಆ. 29 : ಕಾರ್ಕಳ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ಪಿಡಬ್ಲ್ಯೂಡಿಯವರು ರೋಡ್ ಅಗಲೀಕರಣಕ್ಕೆ ಸಂಬಂಧಿಸಿದಂತೆ ವಿದ್ಯುತ್ ಮಾರ್ಗ ಸ್ಥಳಾಂತರದ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆ. 29ರಂದು ಕಾರ್ಕಳದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.
ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾರ್ಕಳ ತಾಲೂಕಿನ ಕೆ.ಎಚ್.ಬಿ ಕಾಲೋನಿ, ಜೋಡುರಸ್ತೆ, ಪದವು, ಗುಂಡ್ಯಡ್ಕ, ಬೊರ್ಗಲ್ ಗುಡ್ಡೆ, ಕುಂಟಾಡಿ, ಪೊಸನೊಟ್ಟು, ಪಳ್ಳಿ, ಆನಂದಿ ಮೈದಾನ, ನಕ್ರೆ, ಪರಪು ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.







































error: Content is protected !!
Scroll to Top