ಕಾರ್ಕಳ : ವಿಶ್ವ ಹೃದಯ ದಿನದ ಅಂಗವಾಗಿ ಕಾರ್ಕಳ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯು ಹೃದಯ ರೋಗದ ಅಪಾಯಗಳನ್ನು ಆರಂಭಿಕ ಹಂತದಲ್ಲೇ ಗುರುತಿಸುವ ಉದ್ದೇಶದಿಂದ ಸಮಗ್ರ ಹೃದಯ ಆರೋಗ್ಯ ತಪಾಸಣಾ ಪ್ಯಾಕೇಜ್ ಪರಿಚಯಿಸಿದೆ.
ರೂ. 3000/- ನ ಈ ಪ್ಯಾಕೇಜ್‌ನಲ್ಲಿ ಇಸಿಜಿ, ಎಕೋ /ಟಿಎಂಟಿ, ಎಫ್.ಬಿ.ಯಸ್, ಶುಗರ್ ಪರೀಕ್ಷೆ, ಲಿಪಿಡ್ ಪ್ರೊಫೈಲ್ ಮತ್ತು ಕಿಡ್ನಿ ಫಂಕ್ಷನ್ ಟೆಸ್ಟ್‌ಗಳನ್ನು ಒಳಗೊಂಡ ಅಗತ್ಯ ರಕ್ತ ಪರೀಕ್ಷೆಗಳು, ಹೃದ್ರೋಗ ತಜ್ಞರ ಸಮಾಲೋಚನೆ ಒಳಗೊಂಡಿರುತ್ತದೆ.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ್ ಕುಮಾರ್ ಕೆ.ಆರ್. ಅವರು ಹಲವು ಬಾರಿ ಹೃದಯ ಸಂಬಂಧಿತ ಅಪಾಯಗಳು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೇ ಇರಬಹುದು. ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಇಂತಹ ಅಪಾಯಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಹಾಗೂ ವೈದ್ಯಕೀಯ ಸಲಹೆ ಪಡೆಯಲು ಸಾಧ್ಯವಾಗುತ್ತದೆ. ಹೃದಯದ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿರುವುದು ಅತ್ಯಂತ ಅವಶ್ಯ ಎಂದರು.
ಅಧಿಕ ರಕ್ತದೊತ್ತಡ, ಮಧುಮೇಹ, ಅಧಿಕ ಕೊಲೆಸ್ಟ್ರಾಲ್, ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ, ಧೂಮಪಾನ ಅಥವಾ ಜಡ ಜೀವನಶೈಲಿ ಹೊಂದಿರುವವರು ಹಾಗೂ ತಮ್ಮ ಹೃದಯ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಬಯಸುವವರಿಗೆ ಈ ತಪಾಸಣೆ ಉಪಯುಕ್ತವಾಗಿದೆ ಎಂದರು. ಹೆಚ್ಚಿನ ಮಾಹಿತಿಗಾಗಿ 9731601150 / 08258-230583 ಅನ್ನು ಸಂಪರ್ಕಿಸಬಹುದು.
ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಹೃದಯ ಆರೋಗ್ಯ ತಪಾಸಣಾ ಶಿಬಿರ




















