ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ರನ್ನರ್‌ಅಪ್

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಿಟ್ಟೆ ಡಾ.ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. ತಂಡದ ಸದಸ್ಯ ಪೂಜಿತ್ ಗೌಡ ಬೆಸ್ಟ್ ಗೋಲ್‌ ಕೀಪರ್ ಅವಾರ್ಡ್ ತನ್ನದಾಗಿಸಿಕೊಂಡಿದ್ದಾರೆ. ತಂಡದಲ್ಲಿದ್ದ ಹೃತ್ವಿಕ್, ಆಖಿಲ್, ವಿಖ್ಯಾತ್ ಮತ್ತು ದೃತಿನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.









































error: Content is protected !!
Scroll to Top