ವಿದ್ಯಾರ್ಥಿಗಳು ಪೋಷಕರು ಕಾನೂನು ಕುರಿತು ಅರಿವು ಹೊಂದುವುದು ಅವಶ್ಯ – ನ್ಯಾಯಾಧೀಶ ಪ್ರವೀಣ್ ನಾಯಕ್
ಕಾರ್ಕಳ : ವಿದ್ಯಾರ್ಥಿಗಳು ಹಾಗೂ ಪೋಷಕರು ಕಾನೂನು ಅರಿವು ಹೊಂದುವುದು ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್ ಹೇಳಿದರು.
ಅವರು ಸೆ. 1ರಂದು ಕಲ್ಲಗುಪ್ಪೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಚಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನ್ಯಾಯವಾದಿ ಶುಭರಾವ್ ವಾಮನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಕಾರ್ಕಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್, ಇಸ್ರೋ ನಿವೃತ್ತ ವಿಜ್ಞಾನಿ ಜನಾರ್ಧನ್ ಇಡ್ಯಾ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗಣೇಶ್ ಸಾಲ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ಕಾರ್ಯದರ್ಶಿ ಸುಮಿತ್ರಾ ಇಡ್ಯಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ದೀಪ್ತಿ ದಿನೇಶ್, ಜ್ಯೋತಿ ಸಾಲ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕ ಮನೋಹರ ಸ್ವಾಗತಿಸಿ, ಸಹ ಶಿಕ್ಷಕಿ ಸುನಂದಾ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಭಾರತಿ ಜಿ. ವಂದಿಸಿದರು. ಗೌರವ ಶಿಕ್ಷಕಿಯರಾದ ಅಶ್ವಿನಿ, ಮಂಜುಳಾ, ದೀಕ್ಷಾ, ಶ್ವೇತಾ ಸಹಕರಿಸಿದರು.
















