ಕಾರ್ಕಳ ತಾಲೂಕಿನ ಮೂವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಾರ್ಕಳ : ಕಾರ್ಕಳ ತಾಲೂಕಿನ ಮೂವರು ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆ ಮುಖ್ಯ ಶಿಕ್ಷಕ ಆರ್.‌ ನಾರಾಯಣ ಶೆಣೈ, ಹೆರ್ಮುಂಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಶ್ರೀಕಾಂತ್‌ ಭಟ್‌, ಕಲ್ಯಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ವೀಣಾ ಆರ್‌., ಅವರು ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಸೆ. 5ರಂದು‌ ಬ್ರಹ್ಮಾವರ ಶ್ಯಾಮಿಲಿ ಶನಾಯ ಸಭಾಭವನದಲ್ಲಿ ಬೆಳಿಗ್ಗೆ 9:30ಕ್ಕೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಡುಪಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















































































error: Content is protected !!
Scroll to Top