ಬಸ್ ಟಿಕೆಟ್ ದರ ಪರಿಷ್ಕರಣೆ : ಪ್ರಯಾಣಿಕರಿಗೆ ಬರೆ

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯದಲ್ಲಿ ಶೀಘ್ರದಲ್ಲೇ ಸಾರಿಗೆ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಸ್ಪಷ್ಟ ಸುಳಿವು ನೀಡಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಇತರೆ ತೈಲೋತ್ಪನ್ನಗಳ ದರವನ್ನು ನಿರಂತರವಾಗಿ ಹೆಚ್ಚಿಸಿದೆ. ತೈಲ ಬೆಲೆ ಏರಿಕೆಯಾಗಿದ್ದರೂ ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಿಲ್ಲ. ಇದರಿಂದಾಗಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಸಾವಿರಾರು ಕೋಟಿ ರೂಪಾಯಿಗಳ ಭಾರಿ ನಷ್ಟ ಅನುಭವಿಸುತ್ತಿವೆ ಎಂದು ತಿಳಿಸಿದ್ದಾರೆ.

ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ಅವರ ನೇತೃತ್ವದ ಸಮಿತಿಯು ಸಮಗ್ರ ಅಧ್ಯಯನ ನಡೆಸುತ್ತಿದ್ದು ಶೀಘ್ರದಲ್ಲೇ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಿದೆ.
ವರದಿ ಬಂದ ಬಳಿಕ ರಾಜ್ಯದಲ್ಲಿನ ಪ್ರಸ್ತುತ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರ ಜೇಬಿಗೆ ಹೆಚ್ಚು ಹೊರೆಯಾಗದಂತೆ ಸ್ವಲ್ಪ ಪ್ರಮಾಣದಲ್ಲಿ ದರ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.























































error: Content is protected !!
Scroll to Top