ಬೈಲೂರು ಮೈನ್‌ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಕಾರ್ಕಳ : ಬೈಲೂರು ಮೈನ್‌ ಶಾಲೆಯಲ್ಲಿ ಸೆ. 6ರಂದು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಸಂಜೀವ ದೇವಾಡಿಗ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ವಿಜಯ ಡಿ. ನಾಯಕ, ವಾಸುದೇವ ಶೆಟ್ಟಿಗಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ವಿದ್ಯಾರ್ಥಿಗಳು ಶಿಕ್ಷಕರ ಪಾದಪೂಜೆ ಮಾಡುವ ಮೂಲಕ ಗುರು ವಂದನೆ ಸಲ್ಲಿಸಿದರು. ಎಸ್‌ಡಿಎಂಸಿ ಸದಸ್ಯರಾದ ರಾಜೇಶ್ ಸ್ವಾಗತಿಸಿ, ಉಪಾಧ್ಯಕ್ಷೆ ಸುಮಂಗಳ ಕಾರ್ಯಕ್ರಮ ನಿರೂಪಿಸಿದರು. ಶೋಭಾ ವಂದಿಸಿದರು.

















































error: Content is protected !!
Scroll to Top