ಉಡುಪಿ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯೆ ಸುಪ್ರಿಯಾ ಶೆಟ್ಟಿ ಅವರ ಪತಿ, ಉದ್ಯಮಿ ಕುಶಲ ಶೆಟ್ಟಿ (59) ಸೆ. 6ರಂದು ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೂಲತಃ ಉಡುಪಿ ಕಡೆಕಾರಿನ ಕುಶಲ ಶೆಟ್ಟಿ ಅವರು ಮುಂಬೈಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ ಅವರು ಮುಂಬೈಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಭಾನುವಾರ ಅವರು ಕಾರ್ಕಳ ಕುಂಟಾಡಿಯ ಮನೆಗೆ ಆಗಮಿಸಲೆಂದು ಮುಂಬೈ ರೈಲ್ವೆ ಸ್ಟೇಷನ್ ತೆರಳಿದ್ದ ಸಂದರ್ಭ ಹೃದಯಾಘಾತಕ್ಕೀಡಾಗಿ ಅಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಉಡುಪಿ ಕಡೆಕಾರಿನ ಮನೆಯಲ್ಲಿ ಸೋಮವಾರ ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕುಸಿದು ಬಿದ್ದು ಉದ್ಯಮಿ ಕುಶಲ ಶೆಟ್ಟಿ ನಿಧನ




























