ಆರೋಪಿಯ ಜಾಮೀನಿಗೆ ‌ನಕಲಿ ಆಧಾರ್ ಕಾರ್ಡ್ ಹಾಜರುಪಡಿಸಿದ ಇಬ್ಬರು ಪೊಲೀಸರ ವಶಕ್ಕೆ

ಉಡುಪಿ: ಆರೋಪಿಯೊಬ್ಬನ ಜಾಮೀನಿಗಾಗಿ ನಕಲಿ ಆಧಾರ್ ಕಾರ್ಡ್ ಅನ್ನು ಕೋರ್ಟ್‌ಗೆ ಹಾಜರುಪಡಿಸಿದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳದ ಉಮರ್ ಫರೂಕ್ (32) ಮತ್ತು ಮಂಗಳೂರಿನ ನಿಶಾಂತ್ ಕುಮಾರ್ (24) ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಆರೋಪಿ ನೋಮಾನ್ ಎಂಬವನಿಗೆ ಜಾಮೀನು ಒದಗಿಸಲು ಈ ಇಬ್ಬರು ನಕಲಿ ಆಧಾರ್ ಕಾರ್ಡ್ ಹಾಜರುಪಡಿಸಿದ್ದರು. ಆಧಾರದ ಕಾರ್ಡ್‌ನಲ್ಲಿನ ಮೂಲ ವ್ಯಕ್ತಿಗಳ ಹೆಸರು ಮತ್ತು ವಿಳಾಸವನ್ನು ಬದಲಾಯಿಸಿ ಆರೋಪಿಗಳು ಕೋರ್ಟ್‌ಗೆ ‌ಸಲ್ಲಿಸಿದ್ದರು. ಸ್ವಂತ ಲಾಭದ ದೃಷ್ಟಿಯಿಂದ ಇಂತಹ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

































































































































error: Content is protected !!
Scroll to Top