ಕಾರ್ಕಳ : ಪರವಾನಗಿ ಪಡೆಯದೇ ಕಲ್ಲಿನ ಕೋರೆಯಲ್ಲಿ ಸ್ಪೋಟಕ ಬಳಸಿ ಕಲ್ಲುಗಳನ್ನು ಒಡೆದು ಬಳಿಕ ಸಾಗಿಸುತ್ತಿದ್ದ ಆರೋಪದ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಸೆ. 10ರ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಕಲ್ಯಾದ ಕುಂಟಾಡಿಯ ಮಣ್ಣು ರಸ್ತೆಯಲ್ಲಿ ಹೋಗುತ್ತಿದ್ದ ಟಿಪ್ಪರ್ ಲಾರಿಯನ್ನು ಹಿಂಬಾಲಿಸಿದ್ದಾರೆ. ಸ್ಥಳದಲ್ಲಿದ್ದ ಹರೀಶ್ ಶೆಟ್ಟಿ, ಸಂತೋಷ್ ಶೆಟ್ಟಿ ಮತ್ತು ಇತರರನ್ನು ವಿಚಾರಣೆ ಮಾಡಿದ್ದು, ಈ ವೇಳೆ ಯಾವುದೇ ಪರವಾನಗಿ ಪಡೆಯದೇ ಸ್ಫೋಟಕ ಬಳಸಿ ಕಲ್ಲು ಪುಡಿ ಮಾಡಿ ಸಾಗಿಸುತ್ತಿರುವ ಅಂಶ ಬಯಲಾಗಿದೆ. ಆರೋಪಿಗಳ ವಿರುದ್ಧ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಪರವಾನಗಿ ಪಡೆಯದೆ ಸ್ಫೋಟಕ ಬಳಕೆ – ಕಲ್ಲು ಒಡೆಯುತ್ತಿದ್ದ ಆರೋಪಿಗಳ ವಿರುದ್ಧ ಕೇಸು ದಾಖಲು

































































