ವೇಣೂರು: ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹನೀಫ್ ಎಂದು ತಿಳಿದು ಬಂದಿದೆ.
ಮಹಿಳೆ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿ ಹನೀಫ್ ಅಕ್ರಮ ಪ್ರವೇಶ ಮಾಡಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಜೊತೆಗೆ ಜಮೀನಿನ ಬೇಲಿ ಮತ್ತು ಕೃಷಿಗೆ ಹಾನಿ ಮಾಡಿ ಸುಮಾರು ಒಂದೂವರೆ ಲಕ್ಷ ರೂ. ಗಳಷ್ಟು ನಷ್ಟ ಉಂಟು ಮಾಡಿದ್ದಾನೆ. ಹಾಗೆಯೇ ಜಾತಿನಿಂದನೆ ಮಾಡಿ ಅವಾಚ್ಯವಾಗಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತನಿಖೆ ನಡೆಸಿದ ಪೊಲೀಸರು ಆರೋಪಿ ಹನೀಫ್‌ನನ್ನು ವಶಕ್ಕೆ ಪಡೆದಿದ್ದು, ಕೋರ್ಟ್ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.




































































