ಕಾಂಗ್ರೆಸ್ ನಾಯಕರ ಮಧ್ಯೆ ಯಾವುದೇ ಒಡಕಿಲ್ಲ: ಯು.ಟಿ. ಖಾದರ್

ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಲಾಗುತ್ತಿದೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಿನಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಒಡಕಿಲ್ಲ ಎಂದು ಸಚಿವ ಯು.ಟಿ. ಖಾದರ್ ಅವರು ತಿಳಿಸಿದ್ದಾರೆ.

ಸಚಿವ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿಯ ಹಿಂದೆ ಸ್ವಪಕ್ಷೀಯರ ಕೈವಾಡ ಇದೆ ಎನ್ನುವ ಆರೋಪಕ್ಕೆ ಅವರು ಈ ಉತ್ತರ ನೀಡಿರುವುದಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಒಮ್ಮತ ಇಲ್ಲ ಎಂದು ಯಾರು ಎಷ್ಟೇ ಪ್ರಯತ್ನ ಮಾಡಿದರೂ ಸಾಬೀತು ಮಾಡಲು ಸಾಧ್ಯವಿಲ್ಲ. ಪಕ್ಷದಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಮನೋಭಾವ, ಸಮನ್ವಯತೆ ಇದೆ. ಕೆಲವರು ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದಕ್ಕೆ ಬೇರೆಯದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಸೇರಿದಂತೆ ಎಲ್ಲಾ ವಿಷಯಗಳಲ್ಲಿಯೂ ಕಾಂಗ್ರೆಸ್ ನಾಯಕರು ಒಮ್ಮತದಿಂದ ಕೆಲಸ ಮಾಡುತ್ತಾರೆ. ನಮ್ಮಲ್ಲಿ ಯಾವುದೇ ರೀತಿಯ ಆಂತರಿಕ ಒಡಕು, ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

















































error: Content is protected !!
Scroll to Top