ಮಕ್ಕಳ ಸುರಕ್ಷತೆಗೆ ಹಾನಿಯಾಗುವ ಪ್ರಕರಣಗಳನ್ನು ಕಾನೂನು ಜಾರಿ ಸಂಸ್ಥೆಗಳಿಗೆ ತಿಳಿಸಲು ಒಪ್ಪಿಕೊಂಡ ಮೆಟಾ
ನವದೆಹಲಿ: ಕೇಂದ್ರ ಸರ್ಕಾರ ಸೋಷಿಯಲ್ ಮಿಡಿಯಾಗಳಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದ್ದು, ಮಕ್ಕಳ ವಿರುದ್ಧ ಲೈಂಗಿಕ ಶೋಷಣೆ, ಸುರಕ್ಷತೆಗೆ ಸಂಬಂಧಿಸಿದ ಪ್ರಕರಣಗಳಿದ್ದಲ್ಲಿ ತಕ್ಷಣವೇ ಕಾನೂನು ಜಾರಿ ಸಂಸ್ಥೆಗಳಿಗೆ ಮಾಹಿತಿ ನೀಡುವುದಕ್ಕೆ ಮೆಟಾ ಸಂಸ್ಥೆ ಒಪ್ಪಿದೆ.
ಮಕ್ಕಳ ಸುರಕ್ಷತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಆದ್ಯತೆಯಾಗಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಿಯಾಗುವ ಮಾತೇ ಇಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರದ ಈ ನಿಲುವಿಗೆ ಮೆಟಾ ಸಂಸ್ಥೆ ಸಹ ಒಪ್ಪಿದ್ದು ಡಿಜಿಟಲ್ ವೇದಿಕೆಗಳಲ್ಲಿ ಮಕ್ಕಳ ಸುರಕ್ಷತೆಗೆ ತೆಗೆದುಕೊಂಡ ಮೊದಲ ಹೆಜ್ಜೆಯಾಗಿದೆ. ಇಂತಹ ಕಟ್ಟುನಿಟ್ಟಿನ ಕ್ರಮಗಳು ಮತ್ತಷ್ಟು ಕಠಿಣ ಕ್ರಮಗಳ ಅವಶ್ಯಕತೆ ಇದೆ ಎಂದೂ ಸರ್ಕಾರ ಅಭಿಪ್ರಾಯ ವ್ಯಕ್ತಪಡಿಸಿದೆ.

ಮೆಟಾದ ಜೊತೆಗೆ ಇತರ ಡಿಜಿಟಲ್ ವೇದಿಕೆಗಳಲ್ಲಿ ಸಹ ಮಕ್ಕಳ ಮೇಲೆ ದುಷ್ಪರಿಣಾಮ ಬೀರುವ ವಿಚಾರಗಳನ್ನು ಪತ್ತೆ ಮಾಡಿ ತಕ್ಷಣವೇ ತೆಗೆದು ಹಾಕುವಂತೆ ಸರ್ಕಾರ ಸೂಚನೆ ನೀಡಿದ್ದು, ನಿಯಮಗಳನ್ನು ಗಾಳಿಗೆ ತೂರಿದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.






































































