ಕರಾಟೆ : ಕ್ರೈಸ್ಟ್‌ಕಿಂಗ್‌ನ ಸುದೀಕ್ಷಾ ಪೂಜಾರಿ – ಅಕ್ಷಯ್ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಿರ್ಗಾನ ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕರ ಹಾಗೂ ಬಾಲಕಿಯರ ವಿಭಾಗಗಳ ಕರಾಟೆ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ಸುದೀಕ್ಷಾ ಪೂಜಾರಿ ಹಾಗೂ ಎಂಟನೇ ತರಗತಿಯ ಅಕ್ಷಯ್ ಪ್ರಭು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ರಾಜ್ಯಮಟ್ಟದ ಪಂದ್ಯಾಟವು ರಾಮನಗರ ಜಿಲ್ಲೆಯಲ್ಲಿ ನಡೆಯಲಿದ್ದು ಕ್ರೈಸ್ಟ್‌ಕಿಂಗ್ ಸಂಸ್ಥೆಯ ಈ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕರಾಟೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.















































































































































error: Content is protected !!
Scroll to Top