ದ.ಕ. ದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಸಲ್ಲಿಸಲು ಸಚಿವ ಯು. ಟಿ. ಖಾದರ್‌ಗೆ ಪತ್ರ
ಮಂಗಳೂರು: ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮರವೀರ ಕೋಟಿ ಚೆನ್ನಯರ ಹೆಸರನ್ನಿಡುವಂತೆ ಮತ್ತು ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಸಚಿವ ಖಾದರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರನ್ನಿಡುವುದು ದ.ಕ. ಜಿಲ್ಲೆಯ ಜನರ ಸಾಂಸ್ಕೃತಿಕ, ಭಾವನಾತ್ಮಕ ಬೇಡಿಕೆಯಾಗಿದ್ದು, ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆಯೂ ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು ಎನ್ನುವ ಕೂಗು ದಶಕಗಳಿಂದ ಕೇಳಿ ಬರುತ್ತಿದೆ. 2010 ರ ಡಿಸೆಂಬರ್ ತಿಂಗಳಿನಲ್ಲಿ ಈ ಸಂಬಂಧ ಬೃಹತ್ ಮಂಜಿನ ಮೆರವಣಿಗೆಯನ್ನು ನಡೆಸಿ ಪ್ರಬಲ ಒತ್ತಾಯವನ್ನು ಮಂಡಿಸಲಾಗಿತ್ತು. ಈ ಬೇಡಿಕೆಗೆ ಸುಧೀರ್ಘ ಇತಿಹಾಸ ಇದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.






































































