‘ವಂದೇ ಮಾತರಂ’ನ ಎರಡು ಚರಣ ಹಾಡಿದರೆ ಸಾಕು ಎಂದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ PIL

ಬೆಂಗಳೂರು: ರಾಷ್ಟ್ರೀಯ ಗೀತೆ ವಂದೇ ಮಾತರಂ ಹಾಡಿನ ಎರಡೇ ಚರಣಗಳನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರಾಜ್ಯದೆಲ್ಲೆಡೆ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಈ ಆದೇಶ ಹೈಕೋರ್ಟ್ ಮೆಟ್ಟಿಲೇರಿದೆ.

ರಾಜ್ಯ ಸರ್ಕಾರ ಸೆ. 8 ರಂದು ಈ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನೆ ಮಾಡಿ ವಕೀಲ ಗಿರೀಶ್ ಭಾರದ್ವಾಜ್ ಅವರ ಪರ ವಕೀಲ ಅಂಗದ್ ಕಾಮತ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ಗೆ ‌ಸಲ್ಲಿಸಿದ್ದಾರೆ.

ಪ್ರಸ್ತುತ ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶ ಕೇಂದ್ರ ಸರ್ಕಾರದ ಪ್ರೊಟೋಕಾಲ್‌ಗೆ ವಿರುದ್ಧವಾಗಿದೆ. ರಾಷ್ಟ್ರೀಯ ಗೀತೆಗೆ ಸಂಬಂಧಿಸಿದ ವಿಷಯ ರಾಜ್ಯ ಅಥವಾ ಸಮ Concurrent ಪಟ್ಟಿಯಲ್ಲಿ ಇಲ್ಲದ ಕಾರಣ, ಸಂವಿಧಾನದ 248ನೇ ವಿಧಿ ಹಾಗೂ ಯೂನಿಯನ್ ಲಿಸ್ಟ್‌ನ ಎಂಟ್ರಿ 97ರ ಅಡಿಯಲ್ಲಿ ಇದು ಸಂಸತ್ತಿನ ವ್ಯಾಪ್ತಿಗೆ ಬರುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ರಾಜ್ಯ ಸರ್ಕಾರ ಸಂವಿಧಾನದ 162ನೇ ವಿಧಿಯಡಿ ಕಾರ್ಯಕಾರಿ ಆದೇಶ ಹೊರಡಿಸುವ ಮೂಲಕ ಇಂತಹ ನಿಯಮ ರೂಪಿಸಲು ಸಾಧ್ಯವಿಲ್ಲ. ಅಷ್ಟೇ ಅಲ್ಲದೆ 256, 257 ಹಾಗೂ 19(1)(a) ವಿಧಿಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಕೋರ್ಟ್‌ಗೆ ಹೇಳಿದ್ದಾರೆ.

ಈ ಪ್ರಕರಣಕ್ಕೆ ಯಾವ ರೀತಿಯ ಫಲಿತಾಂಶ ಸಿಗುವುದೋ ಎನ್ನುವುದು ಸದ್ಯದ ಕುತೂಹಲ.















































































error: Content is protected !!
Scroll to Top