ಪ್ರಧಾನಿ ಮೋದಿ ಅವರಿಂದ ಅಭಿನಂದನೆ
ಬೆಂಗಳೂರು: ಕನ್ನಡದ ಖ್ಯಾತ ಚಲನಚಿತ್ರ ನಟ, ಐದು ದಶಕಗಳಿಗೂ ಹೆಚ್ಚು ಕಾಲ ತಮ್ಮ ನಟನೆಯ ಮೂಲಕವೇ ಜನಮಾನಸದಲ್ಲಿ ಅಚ್ಚಳಿಯದೆ ಛಾಪು ಮೂಡಿಸಿದ ಹಿರಿಯ ಕಲಾವಿದ ಅನಂತನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದು ಬಂದಿದೆ.
ದೇಶದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ 2024 ನೇ ಸಾಲಿನ ದಾದಾ ಸಾಹೆಬ್ ಫಾಲ್ಕೆ ಪ್ರಶಸ್ತಿಗೆ ಅನಂತನಾಗ್ ಅವರನ್ನು ಆಯ್ಕೆ ಮಾಡಲಾಗಿದೆ.

ಅನಂತನಾಗ್ ಅವರು ಗುಜರಾತ್ ಏಕತಾ ನಗರದ ಕೆವಾಡಿಯಾದಲ್ಲಿ ಸೆ. 22 ರಂದು ನಡೆಯಲಿರುವ 72 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಈ ಗೌರವವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.
ಅನಂತ್ನಾಗ್ ಅವರಿಗೆ ಈಗಾಗಲೇ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಸಂದಿದ್ದು, ಭಾರತ ಸರ್ಕಾರದಿಂದ 2025 ರಲ್ಲಿ ಪದ್ಮಭೂಷಣ ಗೌರವಕ್ಕೂ ಭಾಜನರಾಗಿದ್ದರು.
ಅನಂತ್ನಾಗ್ ಅವರಿಗೆ ಈ ಪ್ರಶಸ್ತಿ ಒಲಿದಿರುವ ಹಿನ್ನೆಲೆ ಪ್ರಧಾನಿ ಮೋದಿ ಅವರು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.







































