ಸಿ ಎಂ ಹೆಬ್ರಿ ಭೇಟಿ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಉಡುಪಿ: ಸೆ. 18 ರಂದು ಸಿಎಂ ಡಿ‌. ಕೆ. ಶಿವಕುಮಾರ್ ಅವರು ಹೆಬ್ರಿಗೆ ಆಗಮಿಸಲಿರುವ ಹಿನ್ನೆಲೆ ಉಡುಪಿ ಪೊಲೀಸರು ಹೆಲಿಪ್ಯಾಡ್, ಕಾರ್ಯಕ್ರಮ ನಡೆಯುವ ಸ್ಥಳವನ್ನು ಪರಿಶೀಲಿಸಿದರು.

ಮುಖ್ಯಮಂತ್ರಿ ಭೇಟಿ ಹಿನ್ನೆಲೆ ಭದ್ರತಾ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಇನ್ನಿತರ ಅಗತ್ಯ ಪೂರ್ವಸಿದ್ಧತೆಗಳ ಬಗೆಗೂ ಪೊಲೀಸ್ ಅಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಿದರು.

ರಾಜ್ಯ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಅವರು ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭೀದ್ ಗದ್ಯಾಳ್, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.















































































































































error: Content is protected !!
Scroll to Top