ಸೆ. 18 ರಂದು ಮುಖ್ಯಮಂತ್ರಿ ಹೆಬ್ರಿ ಭೇಟಿ ಹಿನ್ನೆಲೆ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ರಿಜ್ವಾನ್ ಅರ್ಷದ್

ಹೆಬ್ರಿ: ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ನಾಳೆ (ಸೆಪ್ಟೆಂಬರ್ 18) ರಂದು ಜಿಲ್ಲೆಯ ಹೆಬ್ರಿಯ ಸರ್ಕಾರಿ ಪಿ.ಯು ಕಾಲೇಜಿನ ಆವರಣದಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ.

ಈ ಹಿನ್ನೆಲೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮ ನಡೆಯುವ ಸ್ಥಳವನ್ನು ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮಿಷನರ್ ರಶ್ಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.































































































































































error: Content is protected !!
Scroll to Top