30 ಎಸೆತಗಳಲ್ಲಿ ಶತಕ ಭಾರಿಸಿ ಹೊಸ ದಾಖಲೆ
ನವದೆಹಲಿ: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
ಅಫ್ಘಾನಿಸ್ತಾನ್ ಜೊತೆಗಿನ ಪಂದ್ಯದಲ್ಲಿ ಕೇವಲ 30 ಎಸೆತಗಳಲ್ಲಿ ಶತಕ ಪೂರೈಸಿ 2017 ರಲ್ಲಿ 35 ಎಸೆತಗಳಲ್ಲಿ ಶತಕ ಭಾರಿಸಿದ್ದ ರೋಹಿತ್ ಶರ್ಮಾ ಅವರ ದಾಖಲೆ ಮುರಿದಿದ್ದಾರೆ. ಜೊತೆಗೆ ಟೆಸ್ಟ್ ಆಡುವ ದೇಶಗಳಲ್ಲಿ ಜಗತ್ತಿನ ಅತ್ಯಂತ ವೇಗದ ಟಿ20 ಶತಕದ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅವಿನಾಶ್ ಅವರ ಬ್ಯಾಟಿಂಗ್‌ನಲ್ಲಿ ಅಫ್ಘಾನ್ ಬೌಲರ್‌ಗಳ ಎಸೆತಕ್ಕೆ 9 ಬೌಂಡರಿ, 11 ಸಿಕ್ಸ್‌ಗಳನ್ನು ಹೊಡೆದಿದ್ದಾರೆ. 22 ಎಸೆತಗಳಲ್ಲಿ 76 ರನ್ ಗಳಿಸಿ ಪವರ್‌ಪ್ಲೇನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಹೊಸ ದಾಖಲೆಯನ್ನೂ ಮಾಡಿದ್ದಾರೆ. ಇದು ಅಂತರಾಷ್ಟ್ರೀಯ ಕ್ರಿಕೆಟ್ ಟಿ20 ಯಲ್ಲಿ ಮೂರನೇ ಅತ್ಯಂತ ವೇಗದ ಶತಕವಾಗಿದೆ.
ಟಿ20 ಇತಿಹಾಸದಲ್ಲೇ 40 ಎಸೆತಗಳಿಗಿಂತ ಕಡಿಮೆ ಅವಧಿಯಲ್ಲಿ ಒಂದಕ್ಕಿಂತ ಹೆಚ್ಚು ಶತಕ ಸಿಡಿಸಿದ ವಿಶ್ವದ ಏಕೈಕ ಆಟಗಾರ ಎಂಬ ಹೆಗ್ಗಳಿಕೆ ಅಭಿಷೇಕ್ ಮುಡಿಗೇರಿದೆ. ಇದು ಅವರ ಮೂರನೇ ಟಿ20ಐ ಶತಕವಾಗಿದ್ದು, ಇದಕ್ಕೂ ಮುನ್ನ 2025 ರಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ 37 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಭಾರತದ ಪರ ಟಿ20ಐನಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಶತಕ ಬಾರಿಸಿದ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಟ್ಸನ್ ಅವರ ಪಟ್ಟಿಗೆ ಈಗ ಅಭಿಷೇಕ್ ಶರ್ಮಾ ಅವರು ಸೇರಿಕೊಂಡಿದ್ದಾರೆ.















































































