ಮಂಗಳೂರು: ಮಂಗಳೂರಿನ ಜೈಲಿನಲ್ಲಿ ಅಳವಡಿಸಲಾದ ಮೊಬೈಲ್ ಜಾಮರ್‌ನಿಂದ ಕೋರ್ಟ್ ಕಾರ್ಯ ಕಲಾಪಕ್ಕೆ ಅಡ್ಡಿಯಾಗುತ್ತಿದೆ. ಅದನ್ನು ತೆರವು ಮಾಡುವಂತೆ ಆಗ್ರಹಿಸಿ ಮಂಗಳೂರು ವಕೀಲರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿ.ಎಂ. ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಂಪುಟ ಸಭೆ ನಡೆಯುತ್ತಿದ್ದು, ವಕೀಲರು ಈ ಸಂದರ್ಭದಲ್ಲಿ ಅಲ್ಲಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಆದರೆ ಅವರನ್ನು ತಡೆದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಕೀಲರ ಸಂಘದ ಅಧ್ಯಕ್ಷ ಜಗದೀಶ ಶೇಣವ ಮುಂದಾಳತ್ವದಲ್ಲಿ ವಕೀಲರು ಮುತ್ತಿಗೆ ಹಾಕಲು ಮುಂದಾಗಿರುವುದಾಗಿದೆ. ಮೊಬೈಲ್ ಜಾಮರ್ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿ ಕಚೇರಿಗೆ ವಕೀಲರುಗಳು ಮುತ್ತಿಗೆ ಹಾಕುವುದಾಗಿ ಶೇಣವ ಅವರು ಈ ಮೊದಲೇ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು. ಅದರಂತೆ ಇಂದು ವಕೀಲರುಗಳು ಮುತ್ತಿಗೆ ಹಾಕಲು ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.










































